Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:6 - ಕನ್ನಡ ಸತ್ಯವೇದವು C.L. Bible (BSI)

6 ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:6
33 ತಿಳಿವುಗಳ ಹೋಲಿಕೆ  

ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.


ಭೂಕಂಪವಾದನಂತರ ಸಿಡಿಲು ಉಂಟಾಯಿತು; ಅದರಲ್ಲಿಯೂ ಸರ್ವೇಶ್ವರ ಇರಲಿಲ್ಲ. ಕಡೆಗೊಂದು ಮೆಲುದನಿ!


ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ನೀವು ನೋಡುತ್ತಿದ್ದ ಹಾಗೆ ಬೆಟ್ಟದಿಂದ ಒಂದು ಗುಂಡು ಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನಿಂದಾದ ಆ ಪಾದಗಳಿಗೆ ಬಡಿದು ಚೂರುಚೂರು ಮಾಡಿಬಿಟ್ಟಿತು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


“ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು