ಜೆಕರ್ಯ 5:6 - ಕನ್ನಡ ಸತ್ಯವೇದವು C.L. Bible (BSI)6 “ಏನದು?” ಎಂದು ನಾನು ವಿಚಾರಿಸಲು, ಅವನು, “ನಿನಗೆ ಕಾಣಿಸುತ್ತಿರುವ ಆ ವಸ್ತು ಒಂದು ಕೊಳಗದ ಪಾತ್ರೆ,” ಎಂದನು. ಅಲ್ಲದೆ, “ಅದು ಇಡೀ ನಾಡಿನ ಅಧರ್ಮದ ಪ್ರತೀಕ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಏನದು ಎಂದು ಕೇಳಿದ್ದಕ್ಕೆ ಅವನು - ಕಂಡುಬರುತ್ತಿರುವ ಆ ವಸ್ತು ಒಂದು ಕೊಳಗಪಾತ್ರೆ ಎಂದು ತಿಳಿಸಿದನು. ಅಲ್ಲದೆ - ಅದು ಪೂರ್ಣದೇಶದಲ್ಲಿನ ಪಾಪಿಗಳ ಅಧರ್ಮವೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು. ಅಧ್ಯಾಯವನ್ನು ನೋಡಿ |