Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:1 - ಕನ್ನಡ ಸತ್ಯವೇದವು C.L. Bible (BSI)

1 ನನಗೆ ಇನ್ನೊಂದು ದರ್ಶನವಾಯಿತು: ಇಗೋ, ಎರಡು ಬೆಟ್ಟಗಳ ನಡುವೆ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅವು ಕಂಚಿನ ಬೆಟ್ಟಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪುನಃ ನಾನು ಕಣ್ಣೆತ್ತಿನೋಡಲು ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು, ಆ ಬೆಟ್ಟಗಳು ತಾಮ್ರದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಕಣ್ಣೆತ್ತಿ ನೋಡಿದಾಗ, ನಾಲ್ಕು ರಥಗಳು ಎರಡು ಬೆಟ್ಟಗಳ ಮಧ್ಯದಿಂದ ಹೊರಟು ಬಂದವು. ಆ ಬೆಟ್ಟಗಳು ಕಂಚಿನ ಬೆಟ್ಟಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:1
22 ತಿಳಿವುಗಳ ಹೋಲಿಕೆ  

ಆ ಕೊಂಬು ಮುರಿದುಹೋದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದಂತೆಯೆ ಆ ಜನಾಂಗದಿಂದ ನಾಲ್ಕು ರಾಜ್ಯಗಳು ಏಳುವುವು. ಆದರೆ ಮೊದಲನೇ ರಾಜನಿಗೆ ಇದ್ದಷ್ಟು ಶಕ್ತಿ ಅವುಗಳಿಗೆ ಇರುವುದಿಲ್ಲ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ಅದಕ್ಕೆ ದೂತನು, “ಇವು ಆಕಾಶದ ನಾಲ್ಕು ಮಾರುತಗಳು; ಭೂಲೋಕದೊಡೆಯನ ಸಾನ್ನಿಧ್ಯದಿಂದ ಇದೀಗಲೆ ಹೊರಟುಬಂದಿವೆ,” ಎಂದನು.


ಪುನಃ ನಾನು ಕಣ್ಣೆತ್ತಿ ನೋಡಲು, ಇಗೋ, ಹಾರುತ್ತಿರುವ ಒಂದು ಸುರುಳಿ ಕಾಣಿಸಿತು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಆದರೆ ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ.’ ‘ಆಕಾಶದ ಇಬ್ಬನಿ ಅದನ್ನು ತೋಯಿಸಲಿ, ಹುಲ್ಲುಗಿಡಗಳ ಹಾಗು ಕಾಡುಮೃಗಗಳ ನಡುವೆ ಅದಿರಲಿ.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು