Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:10 - ಕನ್ನಡ ಸತ್ಯವೇದವು C.L. Bible (BSI)

10 “ಈ ದಿನವೇ ಜೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗು, ಬಾಬಿಲೋನಿಗೆ ಸೆರೆಹೋಗಿ ಮರಳಿ ಬಂದಿಳಿದಿರುವ ಹೆಲ್ದಾಯ, ತೊಬೀಯ, ಯೆದಾಯ ಎಂಬವರಿಂದ ಕಾಣಿಕೆಯನ್ನು ಸ್ವೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು ತೆಗೆದುಕೋ; ಈ ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ಯನ ಮಗನಾದ ಯೋಷಿಯನ ಮನೆಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ, ಯೆದಾಯ ಎಂಬವರ ಕೈಯಿಂದ ಬೆಳ್ಳಿಬಂಗಾರಗಳನ್ನು ಈಸಿಕೋ; ಈ ದಿವಸವೇ ನೀನು ಹೋಗಿ ಬಾಬೆಲಿನಿಂದ ಬಂದ ಇವರು ಇಳಿದಿರುವ ಚೆಫನ್ಯನ ಮಗನಾದ ಯೋಷೀಯನ ಮನೆಯನ್ನು ಸೇರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ಹೇಳಿದ್ದೇನೆಂದರೆ, “ಹೆಲ್ದಾಯ, ತೋಬೀಯ ಮತ್ತು ಯೆದಾಯ ಇವರು ಬಾಬಿಲೋನಿನಿಂದ ಸೆರೆಯಾಳುಗಳಾಗಿ ಬಂದಿರುತ್ತಾರೆ. ಅವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆ ಸೆರೆಯವರಿಂದ, ಅಂದರೆ ಬಾಬಿಲೋನಿನಿಂದ ಬಂದಿರುವ ಹೆಲ್ದಾಯನಿಂದಲೂ, ತೋಬೀಯನಿಂದಲೂ, ಯೆದಾಯನಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು, ಅದೇ ದಿವಸದಲ್ಲಿ ನೀನು ಜೆಫನ್ಯನ ಮಗ ಯೋಷೀಯನ ಮನೆಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:10
7 ತಿಳಿವುಗಳ ಹೋಲಿಕೆ  

ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು