Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:11 - ಕನ್ನಡ ಸತ್ಯವೇದವು C.L. Bible (BSI)

11 ಅವರಿಂದ ಪಡೆದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಒಂದು ಕಿರೀಟವನ್ನು ಮಾಡಿಸು. ಅದನ್ನು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಗೆ ತೊಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವರಿಂದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಕಿರೀಟವನ್ನು ರೂಪಿಸಿ ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಯ ಮೇಲೆ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಬೆಳ್ಳಿಬಂಗಾರಗಳಿಂದ ಒಂದು ಕಿರೀಟವನ್ನು ಮಾಡಿ ಯೆಹೋಶುವನ ತಲೆಯ ಮೇಲಿಟ್ಟು ಅವನಿಗೆ ಹೀಗೆ ಹೇಳಿರಿ: (ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಇವನ ತಂದೆ ಯೆಹೋಜಾದಾಕನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:11
18 ತಿಳಿವುಗಳ ಹೋಲಿಕೆ  

ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II


ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.


ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.


“ಇವನ ತಲೆಗೆ ಶುಭ್ರವಾದ ಪೇಟವನ್ನು ಸುತ್ತಿರಿ,” ಎಂದು ಆ ದೂತನು ಅಪ್ಪಣೆಮಾಡಲು, ಸೇವಕರು ಯೆಹೋಶುವನ ತಲೆಗೆ ಪೇಟವನ್ನು ಸುತ್ತಿ ಶುಭ್ರ ವಸ್ತ್ರಗಳನ್ನು ತೊಡಿಸಿದರು. ದೇವದೂತನು ಅಲ್ಲಿಯೇ ನಿಂತಿದ್ದನು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು.


ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಅವನ ತಲೆಗೆ ಪೇಟವನ್ನು ಹಾಕಿಸಿ ಪೇಟದ ಮೇಲೆ ಪವಿತ್ರ ಪಟ್ಟಿಯನ್ನು ಕಟ್ಟಿಸು;


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ಇದಲ್ಲದೆ ಅವನು ಅವರ ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಮೂವತ್ತೈದು ಕಿಲೊಗ್ರಾಂ ತೂಕದ್ದು. ಅದರಲ್ಲಿದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.


ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ ಇದು: ಯಾಜಕರಲ್ಲಿ : ಯೋಚಾದಾಕನ ಮಗ ಯೆಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು.


ಅವರ ಕಿರೀಟವು ಹೇಲಮ್, ತೊಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ - ಇವರ ಜ್ಞಾಪಕಾರ್ಥವಾಗಿ ಆಲಯದಲ್ಲೇ ಇರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು