Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:13 - ಕನ್ನಡ ಸತ್ಯವೇದವು C.L. Bible (BSI)

13 ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:13
45 ತಿಳಿವುಗಳ ಹೋಲಿಕೆ  

“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


“ಬಟ್ಟಲು, ಬಿಂದಿಗೆ ಮುಂತಾದ ಪಾತ್ರೆಗಳನ್ನು ಮೊಳೆಗೆ ತಗಲುಹಾಕುವಂತೆ, ತಂದೆಯ ಮಕ್ಕಳು, ಮೊಮ್ಮಕ್ಕಳೆಲ್ಲರು ಅವನಿಗೆ ನೇತುಬೀಳುವರು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನಿನ್ನ ನೆರವಿಂದೇರಿತು ಆತನ ಘನತೆ I ಶೋಭೆ, ಪ್ರಭಾವಗಳ ನೀನವನಿಗಿತ್ತೆ II


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಅವರಿಂದ ಪಡೆದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಒಂದು ಕಿರೀಟವನ್ನು ಮಾಡಿಸು. ಅದನ್ನು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಗೆ ತೊಡಿಸು.


ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು