Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಸೇನಾಧೀಶ್ವರ ಯೆಹೋವನು ಇಂತೆಂದನು - ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:13
23 ತಿಳಿವುಗಳ ಹೋಲಿಕೆ  

ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ಬೇಡಿಕೊಂಡರೂ ನಿಮಗದು ದೊರಕುವುದಿಲ್ಲ. ಏಕೆಂದರೆ, ನಿಮ್ಮ ಬೇಡಿಕೆ ದುರುದ್ದೇಶದಿಂದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.


“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.


“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?


“ಯೆರೆಮೀಯನೇ, ನೀನು ಈ ಮಾತುಗಳನ್ನು ಅವರಿಗೆ ಹೇಳಿದರೂ ಅವರು ಕಿವಿಗೊಡುವುದಿಲ್ಲ, ಕರೆದರೂ ಅವರು ಓಗೊಡುವುದಿಲ್ಲ.


ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.


ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.


“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.


ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು