Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:2 - ಕನ್ನಡ ಸತ್ಯವೇದವು C.L. Bible (BSI)

2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು ರೆಗೆಮ್ ಮೆಲೆಕ್‍ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ ರೆಗೆಮ್ ಮೆಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೇತೇಲಿನ ಜನರು ಸರೆಚರ್, ರೆಗೆಮ್ ಮೆಲೆಕ್ ಮತ್ತು ಅವರ ಜನರನ್ನು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಲು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:2
11 ತಿಳಿವುಗಳ ಹೋಲಿಕೆ  

‘ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು, ಅವರ ಆಶೀರ್ವಾದವನ್ನು ಬೇಡಲು ದೇವಾಲಯಕ್ಕೆ ಹೋಗುತ್ತಿದ್ದೇವೆ. ನಮ್ಮೊಡನೆ ಬನ್ನಿ, ಹೋಗೋಣ’ ಎಂದು ಒಂದು ಊರಿನವರು ಮತ್ತೊಂದೂರಿನವರಿಗೆ ಹೇಳುವರು.


ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.


“ಈ ದಿನವೇ ಜೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗು, ಬಾಬಿಲೋನಿಗೆ ಸೆರೆಹೋಗಿ ಮರಳಿ ಬಂದಿಳಿದಿರುವ ಹೆಲ್ದಾಯ, ತೊಬೀಯ, ಯೆದಾಯ ಎಂಬವರಿಂದ ಕಾಣಿಕೆಯನ್ನು ಸ್ವೀಕರಿಸು.


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು