Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:5 - ಕನ್ನಡ ಸತ್ಯವೇದವು C.L. Bible (BSI)

5 “ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ - ನೀವು ಈ ಎಪ್ಪತ್ತು ವರುಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯಾಜಕರಿಗೂ, ದೇಶದ ಇತರ ಜನರಿಗೂ ಇದನ್ನು ಹೇಳು, ಎಪ್ಪತ್ತು ವರ್ಷಗಳ ತನಕ ನೀವು ಐದನೇ ಮತ್ತು ಏಳನೇ ತಿಂಗಳಿನಲ್ಲಿ ನಿಮ್ಮ ದುಃಖವನ್ನು ಉಪವಾಸ ಮಾಡವದರಲ್ಲಿ ತೋರಿಸಿದಿರಿ. ಆದರೆ ಮಾಡಿದ ಆ ಉಪವಾಸವು ನಿಜವಾಗಿಯೂ ನನಗಾಗಿಯೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:5
27 ತಿಳಿವುಗಳ ಹೋಲಿಕೆ  

ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ನೀವು ಭೋಜನ ಮಾಡಿದ್ದು, ಪಾನಮಾಡಿದ್ದು ನಿಮ್ಮ ತೃಪ್ತಿಗಾಗಿಯೇ ಅಲ್ಲವೆ?”


ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ನೀವು ಏನನ್ನು ಮಾಡಿದರೂ ಪೂರ್ಣಮನಸ್ಸಿನಿಂದ ಮಾಡಿ; ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಪ್ರಭುವನ್ನು ಮೆಚ್ಚಿಸುವುದಕ್ಕಾಗಿ ಮಾಡಿ.


ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.


ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.


ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.


“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.


ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನಗೆ ಈ ಸಂದೇಶವನ್ನು ದಯಪಾಲಿಸಿದರು”


ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು