ಜೆಕರ್ಯ 7:7 - ಕನ್ನಡ ಸತ್ಯವೇದವು C.L. Bible (BSI)7 “ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳು ಜನಭರಿತವಾಗಿ ನೆಮ್ಮದಿಯಿಂದಿದ್ದಾಗ ಹಾಗೂ ದಕ್ಷಿಣ ಪ್ರಾಂತ್ಯದಲ್ಲೂ ಬಯಲು ಪ್ರದೇಶದಲ್ಲೂ ಪ್ರಜೆಯು ತುಂಬಿದ್ದಾಗ ಪ್ರವಾದಿಗಳ ಮುಖಾಂತರ ಪ್ರಕಟಿಸಿದ ಸಂದೇಶ ಇದೇ ಅಲ್ಲವೆ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.” ಅಧ್ಯಾಯವನ್ನು ನೋಡಿ |