Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:10 - ಕನ್ನಡ ಸತ್ಯವೇದವು C.L. Bible (BSI)

10 ಆ ಕಾಲಕ್ಕೆ ಹಿಂದೆ ಆಳುಗಳಿಗೆ ಕೂಲಿ ಕೊಡುವುದಕ್ಕಾಗಲೀ ಎತ್ತುಗಾಡಿಗಳಿಗೆ ಬಾಡಿಗೆ ಕೊಡುವುದಕ್ಕಾಗಲೀ ಯಾರಿಗೂ ಶಕ್ತಿ ಇರಲಿಲ್ಲ. ನಾಡಿನಿಂದ ಹೋಗುವವರಿಗಾಗಲೀ ನಾಡಿನೊಳಗೆ ಪ್ರವೇಶಿಸುವವರಿಗಾಗಲಿ ಶತ್ರುಗಳ ಕಾಟದಿಂದ ರಕ್ಷಣೆ ಇರಲಿಲ್ಲ. ಒಬ್ಬರಿಗೊಬ್ಬರು ಹಗೆಗಳಾಗಿರುವಂತೆ ಮಾಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನ್ನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿ ಕೊಡುವದಕ್ಕಾಗಲಿ ಪ್ರಾಣಿಗಳ ಬಾಡಿಗೆ ಕೊಡುವದಕ್ಕಾಗಲಿ ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ ಎದುರುಬೀಳುವಂತೆ ನಾನು ಮಾಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ದುಡಿತವಿರಲಿಲ್ಲ; ಇಲ್ಲವೆ ಹೋಗುವವನಿಗೂ, ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾಧಾನವಿರಲಿಲ್ಲ. ನಾನು ಪ್ರತಿಯೊಬ್ಬನನ್ನು ಅವರ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:10
11 ತಿಳಿವುಗಳ ಹೋಲಿಕೆ  

ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.


ಸರ್ವೇಶ್ವರ ಇಂತೆನ್ನುತ್ತಾರೆ: “ಸರ್ವೇಶ್ವರನ ಆಲಯ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು