Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:16 - ಕನ್ನಡ ಸತ್ಯವೇದವು C.L. Bible (BSI)

16 “ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:16
29 ತಿಳಿವುಗಳ ಹೋಲಿಕೆ  

ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


:ಸತ್ಯಾನುಸಾರ ನ್ಯಾಯತೀರಿಸಿರಿ.


ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು