Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:23 - ಕನ್ನಡ ಸತ್ಯವೇದವು C.L. Bible (BSI)

23 ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:23
35 ತಿಳಿವುಗಳ ಹೋಲಿಕೆ  

ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು.


ಅವನು ಬಳಸಿದ ಕರವಸ್ತ್ರಗಳನ್ನೂ ಉಡುವಸ್ತ್ರಗಳನ್ನೂ ಜನರು ತೆಗೆದುಕೊಂಡು ಹೋಗಿ ವ್ಯಾಧಿಸ್ಥರಿಗೆ ಮುಟ್ಟಿಸಿದ್ದೇ, ಅವರ ವ್ಯಾಧಿಗಳು ಗುಣವಾಗುತ್ತಿದ್ದವು; ದೆವ್ವಗಳು ಬಿಟ್ಟುಹೋಗುತ್ತಿದ್ದವು.


ಆ ಕಾಲ ಬಂದಾಗ ಏಳುಮಂದಿ ಅವಿವಾಹಿತ ಮಹಿಳೆಯರು ಒಬ್ಬ ಪುರುಷನನ್ನು ಹಿಡಿದುಕೊಂಡು: “ನಾವು ಸ್ವಂತವಾಗಿ ದುಡಿದು ಊಟಮಾಡುತ್ತೇವೆ, ಸ್ವಂತವಾಗಿ ಸಂಪಾದನೆಮಾಡಿ ಬಟ್ಟೆ ಉಡುತ್ತೇವೆ. ನೀನು ನಮ್ಮ ಯಜಮಾನನೆನಿಸಿಕೊಂಡು ನಮ್ಮ ಮಾನವನ್ನು ಕಾಪಾಡಿದರೆ ಸಾಕು,” ಎಂದು ಕೋರುವರು.


ಕಾಲ ಬರುವುದು. ಆಗ ಒಬ್ಬನು ತನ್ನ ಸಹೋದರರಲ್ಲೊಬ್ಬನಿಗೆ: “ನಿನಗೆ ನಿಲುವಂಗಿಯಾದರೂ ಇದೆ. ನೀನೇ ನಮಗೆ ಒಡೆಯನಾಗು. ಹಾಳುಬಿದ್ದ ಈ ಊರಿಗೆ ನೀನೇ ಗೌಡನಾಗು,” ಎಂದು ಹುಟ್ಟುಮನೆಯಲ್ಲೇ ಒತ್ತಾಯಿಸುತ್ತಾ ಹೇಳುವನು.


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ಈವರೆಗೆ ನನಗೆ ಕೇಡು ಮಾಡಿದ್ದಕ್ಕೆ ಹತ್ತಾರು ಸಾರಿ ನನ್ನನ್ನು ಅವಮಾನಿಸಿದ್ದಕ್ಕೆ ನಿಮಗಾಗುವುದಿಲ್ಲವೆ ನಾಚಿಕೆ?


ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು.


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.


ಆಕೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. ಆ ಕ್ಷಣವೇ ಅವಳ ರಕ್ತಸ್ರಾವವು ನಿಂತುಹೋಯಿತು.


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು.


ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು