Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:4 - ಕನ್ನಡ ಸತ್ಯವೇದವು C.L. Bible (BSI)

4 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಯೆರೂಸಲೇವಿುನ ಚೌಕಗಳಲ್ಲಿ ಮುದುಕ ಮುದುಕಿಯರು ಕೂಡ್ರುವರು; ಅತಿವೃದ್ಧಾಪ್ಯದ ನಿವಿುತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ವೃದ್ಧವೃದ್ಧೆಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ಕಾಣಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ವೃದ್ಧರೂ, ಮುದುಕಿಯರೂ ವಾಸವಾಗಿರುವರು. ವೃದ್ದಾಪ್ಯದಿಂದ ಒಬ್ಬೊಬ್ಬರ ಕೈಯಲ್ಲಿ ಅವರವರ ಕೋಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:4
12 ತಿಳಿವುಗಳ ಹೋಲಿಕೆ  

ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಹಣ್ಣು ಹಣ್ಣು ಮುದುಕನಾಗಿ ಸತ್ತನು.


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರಲಿವೆ. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ.


ನಿನ್ನ ವೈರಿಯೇ ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೀನು ನೋಡುವೆ. ಇಸ್ರಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದೇ ಇಲ್ಲ.


ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.


ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು.


“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.


ಇಂಥ ಸಂದರ್ಭಗಳಲ್ಲಿ ಹೊಡೆದವನಿಗೆ ಶಿಕ್ಷೆಯಾಗಬಾರದು. ಆದರೆ ಗಾಯಗೊಂಡವನು ಕೆಲಸ ಮಾಡಲಾರದೆ ಹೋದ ಕಾಲಕ್ಕೆ ತಕ್ಕಷ್ಟು ಹಣ ಕೊಡಬೇಕು. ಹಾಗು ಅವನು ಪೂರ್ಣ ಸ್ವಸ್ಥನಾಗುವ ವರೆಗೂ ನೋಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು