Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:6 - ಕನ್ನಡ ಸತ್ಯವೇದವು C.L. Bible (BSI)

6 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ? ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಳಿದುಳಿದುವರು “ಇದು ಆಶ್ಚರ್ಯಕರ” ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇದು ಈ ದಿವಸಗಳಲ್ಲಿ ಉಳಿದ ಈ ಜನರ ದೃಷ್ಟಿಗೆ ಆಶ್ಚರ್ಯವಾಗಿ ತೋರಿದರೂ, ನನ್ನ ಕಣ್ಣುಗಳಿಗೆ ಸಹ ಆಶ್ಚರ್ಯವಾಗಿ ತೋರುವುದೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:6
13 ತಿಳಿವುಗಳ ಹೋಲಿಕೆ  

“ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?


ಯೇಸು, “ಮಾನವರಿಗೆ ಅಸಾಧ್ಯವಾದುದು ದೇವರಿಗೆ ಸಾಧ್ಯ,” ಎಂದು ಹೇಳಿದರು.


ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.


ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಪ್ರಭುವಿನಿಂದಲೆ ಆದ ಈ ಕಾರ್ಯ I ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು