Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:7 - ಕನ್ನಡ ಸತ್ಯವೇದವು C.L. Bible (BSI)

7 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನೂ ಪೂರ್ವ ಪಶ್ಚಿಮದಲ್ಲಿರುವ ದೇಶಗಳೊಳಗಿಂದ ನನ್ನ ಜನರನ್ನು ರಕ್ಷಿಸುವುದನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:7
21 ತಿಳಿವುಗಳ ಹೋಲಿಕೆ  

“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ಪ್ರಭುವಿನಾ ಸಿರಿನಾಮವು ಸ್ತುತ್ಯ I ಪೂರ್ವ ಪಶ್ಚಿಮದವರೆಗೂ ಸ್ತುತ್ಯ II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II


“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು