Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:1 - ಕನ್ನಡ ಸತ್ಯವೇದವು C.L. Bible (BSI)

1 ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ, ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ, ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:1
22 ತಿಳಿವುಗಳ ಹೋಲಿಕೆ  

ಮಲಾಕಿಯನ ಮುಖಾಂತರ ಇಸ್ರಯೇಲ್ ಜನರಿಗೆ ಸರ್ವೇಶ್ವರ ನೀಡಿದ ದೈವೋಕ್ತಿ:


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ :


ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II


ತಿರುಗಿದೆ ಎನ್ನ ನಯನ ಪ್ರಭುವಿನತ್ತ I ಉರುಲಿಂದ ಕಾಲನು ಕಳಚಿದನಾತ II


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.


ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು