Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:12 - ಕನ್ನಡ ಸತ್ಯವೇದವು C.L. Bible (BSI)

12 ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರುಗಿರಿ. ಎರಡರಷ್ಟು ಕೊಡುವೆನೆಂದು ನಿನಗೆ ಈ ಹೊತ್ತೇ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:12
23 ತಿಳಿವುಗಳ ಹೋಲಿಕೆ  

ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”


ಸರ್ವೇಶ್ವರ ಇಂತೆನ್ನುತ್ತಾರೆ: “ನಿನ್ನ ಭವಿಷ್ಯದ ಬಗ್ಗೆ ಭರವಸೆಯಿಂದಿರು ನಿನ್ನ ಮಕ್ಕಳು ಹಿಂದಿರುಗಿ ಸ್ವದೇಶ ಸೇರುವರು.


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ಖೈದಿಯಾಗಿ ಬಿದ್ದಿರುವ ಸಿಯೋನ್ ಕನ್ಯೆಯೆ, ಕಿತ್ತುಬಿಡು ಬಂಧನವನು ನಿನ್ನ ಕುತ್ತಿಗೆಯಿಂದ ಸಿಂಹಾಸನಾರೂಢಳಾಗು ಜೆರುಸಲೇಮೆ ಝಾಡಿಸಿ ಎದ್ದುನಿಂತು ದುಂಬುಧೂಳಿನಿಂದ!


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಸತ್ತವರು ನಿನ್ನನ್ನು ಕೀರ್ತಿಸರು ಪಾತಾಳದವರು ನಿನ್ನನ್ನು ಸ್ತುತಿಸರು ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸರು.


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು