Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:15 - ಕನ್ನಡ ಸತ್ಯವೇದವು C.L. Bible (BSI)

15 ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:15
25 ತಿಳಿವುಗಳ ಹೋಲಿಕೆ  

“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.


ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II


ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.


ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.


ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.


ಅದನು ಬಿಲ್ಲುಬಾಣಗಳಿಂದ ಓಡಿಸಲು ಅಸಾಧ್ಯ ಕಣಿವೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.


ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು.


‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು