Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:17 - ಕನ್ನಡ ಸತ್ಯವೇದವು C.L. Bible (BSI)

17 ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:17
37 ತಿಳಿವುಗಳ ಹೋಲಿಕೆ  

ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.


ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !


ನನ್ನ ನಲ್ಲ, ತೇಜೋಮಯ, ರಕ್ತವರ್ಣ ಹತ್ತುಸಾವಿರ ಜನರಲ್ಲಿ ಶ್ರೇಷ್ಠ.


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಪ್ರಕಟಿಸುವರವರು ನಿನ್ನ ಮಹೋಪಕಾರವನು I ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು II


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು