Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:4 - ಕನ್ನಡ ಸತ್ಯವೇದವು C.L. Bible (BSI)

4 ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರವಿುಸಿ ಪೌಳಿಗೋಡೆಯನ್ನು ಸಮುದ್ರದೊಳಕ್ಕೆ ಹೊಡೆದು ಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:4
14 ತಿಳಿವುಗಳ ಹೋಲಿಕೆ  

ಅಪಾರ ಅಪರಾಧಗಳಿಂದ, ಅನ್ಯಾಯ ವ್ಯಾಪಾರಗಳಿಂದ ನಿನ್ನಲ್ಲಿನ ಪವಿತ್ರಾಲಯ ಅಶುದ್ಧವಾಯಿತು ನಿನ್ನಿಂದ. ಎಂದೇ, ನಾ ಬರಮಾಡಿದೆ ಬೆಂಕಿಯನು ನಿನ್ನೊಳಗಿಂದ ನೋಡ್ವರೆಲ್ಲರ ಮುಂದೆ ಸುಟ್ಟು ಭಸ್ಮ ಮಾಡಿತು ನಿನ್ನ.


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


ಆದಕಾರಣ ನಾನು ಟೈರಿನ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”


ನೀ ಪಾಪಿಯಾದೆ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರಗಳು ತುಂಬಿಕೊಂಡದ್ದರಿಂದ. ಎಂದೇ, ಹೊಲಸೆಂಬಂತೆ ನಿನ್ನ ತಳ್ಳಿಬಿಟ್ಟೆ ದೇವರ ಬೆಟ್ಟದಿಂದ ಕಿತ್ತೆಸೆದುಬಿಟ್ಟೆ ಕೆಂಡದ ನಡು ಮಡುವಿನ ನೆಲೆಯಿಂದ ನೆರಳು ನೀಡುವ ಕೆರೂಬಿಯೇ ಎಸೆಯಿತು ನಿನ್ನನ್ನು ಅಲ್ಲಿಂದ.


ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ಇದನ್ನು ಕಂಡು ಅಷ್ಕೆಲೋನ್ ಭಯದಿಂದ ನಡುಗುವುದು. ಗಾಜಾ ಪಟ್ಟಣ ಸಂಕಟದಿಂದ ಗೋಳಾಡುವುದು; ಎಕ್ರೋನ್ ನಿರಾಶೆಯಿಂದ ಪ್ರಲಾಪಿಸುವುದು; ಗಾಜಾ ಪಟ್ಟಣಕ್ಕೆ ರಾಜನೇ ಇಲ್ಲದಂತಾಗುವುದು. ಅಷ್ಕೆಲೋನ್ ನಿರ್ಜನ ಪ್ರದೇಶವಾಗುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು