Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:9 - ಕನ್ನಡ ಸತ್ಯವೇದವು C.L. Bible (BSI)

9 ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:9
43 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!”


ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಿದರು. ಯೇಸು ಅದನ್ನು ಹತ್ತಿ ಕುಳಿತರು.


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ನೀನು ಅಗ್ನಿಗೆ ಆಹುತಿಯಾಗುವೆ; ನೀನು ರಕ್ತ ನಾಡಿನಲ್ಲೆಲ್ಲಾ ಇಂಗಿರುವುದು; ನೀನು ಇನ್ನು ನೆನಪಿಗೆ ಬರುವುದಿಲ್ಲ; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು