Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರಿಗೆ ಅರಸನಾಗಿದ್ದ ದಾವೀದನ ಮಗ ಸೊಲೊಮೋನನ ಜ್ಞಾನೋಕ್ತಿಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:1
14 ತಿಳಿವುಗಳ ಹೋಲಿಕೆ  

ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ದಾವೀದನ ಮಗನೂ ಜೆರುಸಲೇಮನ್ನು ಆಳುವ ಅರಸನೂ ಆದ ಉಪದೇಶಕನ ಪ್ರವಚನಗಳು:


ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು. ಜುದೇಯದ ಅರಸ ಹಿಜ್ಕೀಯನ ಲೇಖಕರು ಸಂಗ್ರಹಿಸಿದ ನುಡಿಗಳು:


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.


ಉಪದೇಶಕನು ಜ್ಞಾನಿಯಾಗಿದ್ದ; ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದ. ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ, ಕ್ರಮಪಡಿಸಿದ.


ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.


“ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.


ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು.


ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು.


ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು