Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:21 - ಕನ್ನಡ ಸತ್ಯವೇದವು C.L. Bible (BSI)

21 ಪೇಟೆಯ ಜನಜಂಗುಳಿಯ ನಡುವೆ, ಪುರ ದ್ವಾರಗಳಲ್ಲೆ, ಹೀಗೆಂದು ಪ್ರಚಾರ ಮಾಡುತ್ತಿದ್ದಾಳೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪೇಟೆಯ ಅಗ್ರಸ್ಥಾನದಲ್ಲಿಯೂ ಊರಬಾಗಿಲಿನಲ್ಲಿಯೂ ಆಕೆಯು ನುಡಿಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:21
9 ತಿಳಿವುಗಳ ಹೋಲಿಕೆ  

“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.


ಜನರು ತಂಡೋಪತಂಡವಾಗಿ ಕೂಡಿಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು.


ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.


ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.


ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ಜ್ಞಾನವೆಂಬಾಕೆ ಹಾದಿಗಳಲ್ಲಿ ಕೂಗುತ್ತಾ ಇದ್ದಾಳೆ; ಬೀದಿಚೌಕಗಳಲ್ಲಿ ದನಿಗೈಯುತ್ತಾ ಇದ್ದಾಳೆ;


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ಕೇಳಿ, ಜ್ಞಾನವೆಂಬಾಕೆ ಕರೆಯುತ್ತಾಳೆ ವಿವೇಕವೆಂಬಾಕೆ ಕೂಗಿ ಕರೆಯುತ್ತಿದ್ದಾಳೆ!


ನಗರದ ಹೆಬ್ಬಾಗಿಲುಗಳಲ್ಲೂ ಜನಸೇರುವ ಪ್ರವೇಶದ್ವಾರಗಳಲ್ಲೂ ಘೋಷಿಸುತ್ತಾಳೆ ಹೀಗೆಂದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು