Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:28 - ಕನ್ನಡ ಸತ್ಯವೇದವು C.L. Bible (BSI)

28 ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರ ಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:28
26 ತಿಳಿವುಗಳ ಹೋಲಿಕೆ  

ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ಬೇಡಿಕೊಂಡರೂ ನಿಮಗದು ದೊರಕುವುದಿಲ್ಲ. ಏಕೆಂದರೆ, ನಿಮ್ಮ ಬೇಡಿಕೆ ದುರುದ್ದೇಶದಿಂದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ.


ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ I ಸರ್ವೇಶ್ವರನಿಗೆ ಮೊರೆಯಿಟ್ಟರು ದೊರಕಲಿಲ್ಲ ಉತ್ತರ II


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ಎಂತಲೆ ದುರುಳರ ಸೊಕ್ಕನ್ನು ಮುಂದಿಟ್ಟು ಗೋಳಿಟ್ಟರೂ ದೇವರು ಅವರಿಗೆ ಉತ್ತರ ಕೊಡುವುದಿಲ್ಲ.


ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II


ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.


ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.


ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.


ನೀವು ಹಿಂದಿರುಗಿ ಬಂದು ಸರ್ವೇಶ್ವರನ ಮುಂದೆ ಗೋಳಾಡಿದಿರಿ. ಆಗ ಅವರು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ನಿಮ್ಮನ್ನು ರಕ್ಷಿಸಲೂ ಇಲ್ಲ.


ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II


ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು