Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:33 - ಕನ್ನಡ ಸತ್ಯವೇದವು C.L. Bible (BSI)

33 ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನನ್ನ ಮಾತಿಗೆ ಕಿವಿಗೊಡುವವನಾದರೋ ಸ್ವಸ್ಥವಾಗಿರುತ್ತಾ ಯಾವ ಕೇಡಿಗೂ ಭಯಪಡದೆ ಸುರಕ್ಷಿತನಾಗಿರುವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:33
22 ತಿಳಿವುಗಳ ಹೋಲಿಕೆ  

ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.


ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.


ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


“ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.


ಸಜ್ಜನರಿಗೆ ಸಂಭವಿಸದು ಯಾವ ಕೆಡುಕು; ದುರ್ಜನರಿಗೆ ತುಂಬಿತುಳುಕುವುದು ಕೇಡು.


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


“ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ನಾಡಿನಲ್ಲಿ ನಿರ್ಭಯವಾಗಿ ಬಾಳುವಿರಿ.


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ಅದನ್ನು ಕೇಳಿ ಆತನ ಸೇವಾಸಕ್ತರಾದಲ್ಲಿ ತಮ್ಮ ದಿವಸಗಳನ್ನು ಕಳೆವರು ಸುಖದಲ್ಲಿ ತಮ್ಮ ವರುಷಗಳನು ಹರ್ಷಾನಂದದಲ್ಲಿ.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು