Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:4 - ಕನ್ನಡ ಸತ್ಯವೇದವು C.L. Bible (BSI)

4 ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವು ಮೂಢರಿಗೆ ಜಾಣತನವನ್ನೂ ಯೌವನಸ್ಥರಿಗೆ ತಿಳುವಳಿಕೆಯನ್ನೂ ಬುದ್ಧಿಯನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:4
19 ತಿಳಿವುಗಳ ಹೋಲಿಕೆ  

ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.


ಜ್ಞಾನವೆಂಬ ನನಗೆ ಜಾಣ್ಮೆಯೆ ಸಹವಾಸಿ ಯುಕ್ತ ತಿಳುವಳಿಕೆ ನನಗೆ ಸಂಗಾತಿ.


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.


ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು