Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:6 - ಕನ್ನಡ ಸತ್ಯವೇದವು C.L. Bible (BSI)

6 ಗಾದೆಗಳನ್ನೂ ಗೂಢಾರ್ಥಗಳನ್ನೂ ಜ್ಞಾನಿಯ ನುಡಿ ಹಾಗು ಒಗಟುಗಳನ್ನೂ ತಿಳಿದುಕೊಳ್ಳಲು ಸಹ ಇವು ಸಾಧನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವು ಗಾದೆ, ಸಾಮ, ಜ್ಞಾನಿಗಳ ನುಡಿ, ಒಗಟು ಇವುಗಳನ್ನು ತಿಳಿಯಲು ಸಾಧನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:6
14 ತಿಳಿವುಗಳ ಹೋಲಿಕೆ  

ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II


ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.


ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.


ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು