Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:7
16 ತಿಳಿವುಗಳ ಹೋಲಿಕೆ  

ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಸರ್ವೇಶ್ವರನಲ್ಲಿನ ಭಯಭಕ್ತಿ ಜ್ಞಾನಕ್ಕೆ ಮೂಲ; ಪರಮಪಾವನನನ್ನು ಅರಿಯುವುದು ವಿವೇಕ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.


ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ಆಗ ಅರಿತುಕೊಳ್ಳುವೆ ದೈವಭಯವನ್ನು, ಪಡೆದುಕೊಳ್ಳುವೆ ದೈವಜ್ಞಾನವನ್ನು.


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ಮೂಢನ ಸಂಗಡ ಮಾತನಾಡಬೇಡ; ನಿನ್ನ ಬುದ್ಧಿಮಾತನ್ನು ಅವನು ಮಾನ್ಯಮಾಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು