Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:8 - ಕನ್ನಡ ಸತ್ಯವೇದವು C.L. Bible (BSI)

8 ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:8
20 ತಿಳಿವುಗಳ ಹೋಲಿಕೆ  

ಮಗನೇ, ನಿನ್ನ ತಂದೆಯ ಆಜ್ಞೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದೆ ಮಾಡು.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.


ಮಸ್ಸಾರಾಜ್ಯದ ಅರಸ ಲೆಮೂವೇಲನ ವಚನಗಳು: ಅವನ ತಾಯಿ ಅವನಿಗೆ ಉಪದೇಶಿಸಿದ ಹಿತೋಕ್ತಿಗಳು:


ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಮಗನೇ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿ ಇಡು.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಆದರೆ ಮಗನೇ, ಅವರೊಡನೆ ಸೇರಬೇಡ; ನೀನು ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಗುರುಗಳ ಮಾತನ್ನು ಗಮನಿಸದೆ ಹೋದೆನಲ್ಲಾ! ಬೋಧಕರಿಗೆ ಕಿವಿಗೊಡದೆ ಹೋದೆನಲ್ಲಾ!


ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನ ತಾಯಿಯನ್ನು ಅಸಡ್ಡೆಮಾಡದಿರು.


ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.


ಅದರಂತೆ ರೂತಳು ಕಣಕ್ಕೆ ಹೋಗಿ ಅತ್ತೆ ಹೇಳಿಕೊಟ್ಟಂತೆ ಮಾಡಿದಳು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು