Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:15 - ಕನ್ನಡ ಸತ್ಯವೇದವು C.L. Bible (BSI)

15 ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ; ಬಡವನಿಗೆ ಬಡತನವು ಅಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಐಶ್ವರ್ಯವು ಸಾಹುಕಾರನನ್ನು ಕಾಪಾಡುತ್ತದೆ. ಬಡತನವಾದರೋ ಬಡವನನ್ನು ನಾಶಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:15
13 ತಿಳಿವುಗಳ ಹೋಲಿಕೆ  

ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.


ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.


ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನದ ವೈಶಿಷ್ಟ್ಯವೆಂದರೆ ಅದು ಜ್ಞಾನಿಗೆ ಜೀವದಾಯಕ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು