Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:17 - ಕನ್ನಡ ಸತ್ಯವೇದವು C.L. Bible (BSI)

17 ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಶಿಸ್ತನ್ನು ಸ್ವೀಕರಿಸಿಕೊಳ್ಳುವವನು ಜೀವಮಾರ್ಗವನ್ನು ತೋರಿಸುತ್ತಾನೆ. ತಿದ್ದುಪಡಿಯನ್ನು ಅಲಕ್ಷಿಸುವವನು ಇತರರನ್ನು ದಾರಿ ತಪ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:17
22 ತಿಳಿವುಗಳ ಹೋಲಿಕೆ  

ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


“ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ಈ ಮುದುಕ, ಬೀದಿಯಲ್ಲಿ ಕುಳಿತಿದ್ದ ಆ ದಾರಿಗನನ್ನು ಕಂಡು, “ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.


ದೇವಜನರ ಸಭೆಕೂಟಗಳಲ್ಲಿ ಎಲ್ಲಾ ತರದ ನಿಂದೆ ಆಪಾದನೆಗಳಿಗೆ ಗುರಿಯಾದೆನಲ್ಲಾ!”


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು