Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:18 - ಕನ್ನಡ ಸತ್ಯವೇದವು C.L. Bible (BSI)

18 ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ; ಚಾಡಿಗಾರನು ಜ್ಞಾನಹೀನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದ್ವೇಷವನ್ನು ಮರೆಮಾಡಲು ಒಬ್ಬನು ಸುಳ್ಳು ಹೇಳಬೇಕಾಗಬಹುದು. ಆದರೆ ಹರಟೆಗಾರನು ನಿಜವಾಗಿಯೂ ಮೂಢನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:18
18 ತಿಳಿವುಗಳ ಹೋಲಿಕೆ  

ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಸೋದರನಿಗೆ ವಿರುದ್ಧ ಸುಳ್ಳಾಡಲು ಕೂರುತ್ತೀರಿ I ಒಡಹುಟ್ಟಿದವರಿಗೆ ಎದುರಾಗಿ ಚಾಡಿಹೇಳುತ್ತೀರಿ II


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ಈ ಕಾರಣ ಅವನ ಭಯ ಮತ್ತಷ್ಟೂ ಅಧಿಕವಾಯಿತು; ದಾವೀದನನ್ನು ತನ್ನ ಜೀವಮಾನ ಪರಿಯಂತ ವೈರಿಯೆಂದು ಭಾವಿಸತೊಡಗಿದನು.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು