Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:20 - ಕನ್ನಡ ಸತ್ಯವೇದವು C.L. Bible (BSI)

20 ಸಜ್ಜನರ ನಾಲಿಗೆ ಚೊಕ್ಕಬೆಳ್ಳಿ; ದುರ್ಜನರ ಹೃದಯ ಹುಲ್ಲುಕಡ್ಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಶಿಷ್ಟರ ನಾಲಿಗೆ ಚೊಕ್ಕಬೆಳ್ಳಿ; ದುಷ್ಟನ ಹೃದಯ ಹುಲ್ಕಡ್ಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಒಳ್ಳೆಯವನ ಮಾತುಗಳು ಶುದ್ಧ ಬೆಳ್ಳಿಯಂತಿವೆ. ಕೆಡುಕನ ಆಲೋಚನೆಗಳಾದರೋ ಪ್ರಯೋಜನಕ್ಕೆ ಬಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; ದುಷ್ಟರ ಹೃದಯವು ಬೆಲೆಯಿಲ್ಲದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:20
12 ತಿಳಿವುಗಳ ಹೋಲಿಕೆ  

ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.


ನೀತಿಯುತ ಮಾತನ್ನು ಅರಸನು ಮೆಚ್ಚುವನು; ಸತ್ಯವಾದಿಯನ್ನು ಆತನು ಪ್ರೀತಿಸುವನು.


ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.


ನಾನು ನೀಡುವ ಫಲ ಬಂಗಾರಕ್ಕಿಂತ ಶ್ರೇಷ್ಠ ನನ್ನಿಂದ ದೊರಕುವ ಆದಾಯ ಅಪ್ಪಟ ಬೆಳ್ಳಿಗಿಂತ ಅಮೂಲ್ಯ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು