Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:21 - ಕನ್ನಡ ಸತ್ಯವೇದವು C.L. Bible (BSI)

21 ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಶಿಷ್ಟರ ಭಾಷಣ ಬಹುಜನಪೋಷಣ; ಬುದ್ಧಿಯ ಕೊರತೆ ಮೂರ್ಖರ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:21
28 ತಿಳಿವುಗಳ ಹೋಲಿಕೆ  

ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.


ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.


ಅವನು ಶಿಸ್ತುಪಾಲನೆಯಿಲ್ಲದೆ ನಾಶವಾಗುತ್ತಾನೆ; ಅತಿ ಮೂರ್ಖತನದಿಂದಲೇ ಮೋಸಹೋಗುತ್ತಾನೆ.


“ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.


ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ.


ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು