Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:22 - ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:22
31 ತಿಳಿವುಗಳ ಹೋಲಿಕೆ  

ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II


ಬೇಗಬೇಗನೆ ಬಾಚಿಕೊಂಡ ಮೊದಲ ಸೊತ್ತು, ಕೊನೆಯಲ್ಲಿ ಕಳೆದುಹೋಗುವುದು ನಿಶ್ಚಿತ.


ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.


ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.


ನೀವಾದರೋ ಸರ್ವೇಶ್ವರನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ ಇಸ್ರಯೇಲರ ಪಾಳೆಯವೇ ಶಾಪಕ್ಕೆ ಗುರಿಯಾಗಿ ನಾಶವಾದೀತು.


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ಅವನು ದಿನದಿಂದ ದಿನಕ್ಕೆ ಹೆಚ್ಚು ಆಸ್ತಿವಂತನಾಗಿ ದೊಡ್ಡ ಧನವಂತನಾದನು.


ಆದುದರಿಂದ ಸರ್ವೇಶ್ವರಾ, ನೀವು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು’ ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿಟ್ಟು ಅವರನ್ನು ಆರಾಧಿಸಬೇಕು.


“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.


ಅಮಚ್ಯನು ಆ ದೈವಪುರುಷನನ್ನು, “ಹಾಗಾದರೆ ನಾನು ಇಸ್ರಯೇಲ್ ಸೈನ್ಯಕ್ಕಾಗಿ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟುಬಿಟ್ಟೆನಲ್ಲಾ, ಏನು ಮಾಡುವುದು?,” ಎಂದು ಕೇಳಿದನು. ಅವನು, “ಸರ್ವೇಶ್ವರ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಕೊಡಬಲ್ಲರು,” ಎಂದನು.


ನನ್ನನ್ನು ಪ್ರೀತಿಸುವವರಿಗೆ ದೊರಕಿಸುವೆ ಸಿರಿಸಂಪತ್ತನ್ನು ಬಾಧ್ಯವಾಗಿ ನಾನವರ ಬೊಕ್ಕಸಗಳನ್ನು ತುಂಬಿಸುವೆ ಭರ್ತಿಯಾಗಿ.


ಬುದ್ಧಿವಂತರ ಕಿರೀಟ ಅವರ ಜ್ಞಾನವೇ; ದಡ್ಡರ ಶಿರಮುಕುಟ ಅವರ ದಡ್ಡತನವೆ.


ಹತ್ತು ದಿನಗಳಾದ ಮೇಲೆ ರಾಜಭೋಜನ ಉಣ್ಣುತ್ತಿದ್ದ ಎಲ್ಲ ಯುವಕರಿಗಿಂತ ಇವರು ಸುಂದರವಾಗಿಯೂ ಪುಷ್ಟರಾಗಿಯೂ ಕಾಣಿಸಿದರು.


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;


ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು