Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:3 - ಕನ್ನಡ ಸತ್ಯವೇದವು C.L. Bible (BSI)

3 ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ನೀತಿವಂತನನ್ನು ಹಸಿವೆಗೊಳಿಸನು; ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀತಿವಂತರು ಹಸಿವೆಯಿಂದಿರಲು ಯೆಹೋವನು ಬಿಡುವುದಿಲ್ಲ. ದುಷ್ಟರ ಆಸೆಯನ್ನಾದರೋ ಆತನು ಭಂಗಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:3
23 ತಿಳಿವುಗಳ ಹೋಲಿಕೆ  

ಸಜ್ಜನ ದಿಕ್ಕಿಲ್ಲದಿರುವುದನು, ಅವನ ಸಂತತಿ ಭಿಕ್ಷೆ ಬೇಡುವುದನು I ನಾ ಕಾಣೆನು, ವೃದ್ಧ ನಾನೆಂದೂ ಕಾಣೆನು, ಬಾಲ್ಯದಿಂದ ಕಾಣೆನು II


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II


ತಪ್ಪಿಸುವನವನು ಪ್ರಾಣವನು ಮರಣದಿಂದ I ಉಳಿಸುವನು ಜೀವವನು ಕ್ಷಾಮಡಾಮರದಿಂದ II


ಬರಗಾಲದಲ್ಲಿ ಮರಣದಿಂದ ಕಾಪಾಡುವನು ಯುದ್ಧಕಾಲದಲ್ಲಿ ಕತ್ತಿಯಿಂದ ರಕ್ಷಿಸುವನು.


ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ಅವನ ಮನೆಯ ಧನಧಾನ್ಯ ಹಾಳಾಗುವುದು ದೇವರ ಸಿಟ್ಟಿನಾದಿನ ನೀರುಪಾಲಾಗುವುದು.


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು