Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:8 - ಕನ್ನಡ ಸತ್ಯವೇದವು C.L. Bible (BSI)

8 ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜ್ಞಾನಹೃದಯನು ಆಜ್ಞೆಗಳನ್ನು ವಹಿಸುವನು; ಹರಟೆಯ ಮೂರ್ಖನು ಕೆಡವಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜ್ಞಾನಿಯು ಆಜ್ಞೆಗಳಿಗೆ ವಿಧೇಯನಾಗುತ್ತಾನೆ. ಮೂಢನಾದರೋ ವಾದಮಾಡಿ ತನಗೇ ತೊಂದರೆ ತಂದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:8
15 ತಿಳಿವುಗಳ ಹೋಲಿಕೆ  

ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಬಾಯಿಯನ್ನು ಕಾಯುವವನು ಜೀವವನ್ನು ಕಾಯುವನು; ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.


ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು