Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:11 - ಕನ್ನಡ ಸತ್ಯವೇದವು C.L. Bible (BSI)

11 ಸತ್ಪುರುಷರ ಆಶೀರ್ವಾದದಿಂದ ಪುರೋದ್ಧಾರ; ದುಷ್ಟಜನರ ಕೆಟ್ಟ ಬಾಯಿಂದ ಅದರ ಸಂಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವದು, ಕೆಟ್ಟವರ ಬಾಯಿಂದ ಕೆಡವಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:11
14 ತಿಳಿವುಗಳ ಹೋಲಿಕೆ  

ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ.


ಕುಚೋದ್ಯರು ಪಟ್ಟಣಕ್ಕೆ ಬೆಂಕಿ ಹಚ್ಚುವರು; ಜ್ಞಾನಿಗಳೊ ರೋಷಾಗ್ನಿಯನ್ನು ಆರಿಸುವರು.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ಆಗ ಅಲ್ಲಿದ್ದವರು ತಮ್ಮಲ್ಲೇ ಒಬ್ಬ. ಜ್ಞಾನಿಯನ್ನು ಕಂಡುಹಿಡಿದರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದ. ಆದರೆ ಆ ಬಡಜ್ಞಾನಿಯನ್ನು ಆಮೇಲೆ ಯಾರೂ ಸ್ಮರಿಸಲಿಲ್ಲ.


ಆತ ವಿಮೋಚಿಸುತ್ತಾನೆ ನಿರ್ದೋಷಿಗಳನು ನಿನ್ನ ಕೈ ಶುದ್ಧವಿರಲಿ ವಿಮೋಚಿಸುವನು ನಿನ್ನನು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ.


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.


ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು