Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:12 - ಕನ್ನಡ ಸತ್ಯವೇದವು C.L. Bible (BSI)

12 ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೆರೆಯವನನ್ನು ಹೀನೈಸುವವನು ಬುದ್ಧಿಹೀನನು; ವಿವೇಕಿಯು ಬಾಯಿಬಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬುದ್ಧಿಹೀನನು ಇತರರನ್ನು ಹೀನೈಸುತ್ತಾನೆ. ಆದರೆ ಬುದ್ಧಿವಂತನು ಮೌನವಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:12
15 ತಿಳಿವುಗಳ ಹೋಲಿಕೆ  

ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಏನನ್ನೂ ಹೇಳದೆ ಸುಮ್ಮನಿದ್ದರು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು.


ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.


ಸತ್ಪುರುಷರ ಆಶೀರ್ವಾದದಿಂದ ಪುರೋದ್ಧಾರ; ದುಷ್ಟಜನರ ಕೆಟ್ಟ ಬಾಯಿಂದ ಅದರ ಸಂಹಾರ.


ಚಾಡಿಕೋರನು ಗುಟ್ಟನ್ನು ರಟ್ಟುಮಾಡುವನು; ನಂಬಿಕಸ್ತನು ಅದನ್ನು ಮುಚ್ಚಿ ಮರೆಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು