Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:13 - ಕನ್ನಡ ಸತ್ಯವೇದವು C.L. Bible (BSI)

13 ಚಾಡಿಕೋರನು ಗುಟ್ಟನ್ನು ರಟ್ಟುಮಾಡುವನು; ನಂಬಿಕಸ್ತನು ಅದನ್ನು ಮುಚ್ಚಿ ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಚಾಡಿಕೋರನು ಗುಟ್ಟು ರಟ್ಟುಮಾಡುವನು; ನಂಬಿಗಸ್ತನು ಸಂಗತಿಯನ್ನು ಗುಪ್ತಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗುಟ್ಟು ರಟ್ಟುಮಾಡುವವನನ್ನು ನಂಬಲಾಗದು. ಆದರೆ ನಂಬಿಗಸ್ತನು ವಿಷಯಗಳನ್ನು ರಹಸ್ಯವಾಗಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:13
14 ತಿಳಿವುಗಳ ಹೋಲಿಕೆ  

ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.


ವ್ಯಾಜ್ಯವನ್ನು ನೆರೆಯವನ ಸಂಗಡವೆ ಚರ್ಚಿಸಿ ತೀರ್ಮಾನಿಸಿಕೊ; ನೆರೆಹೊರೆಯವರ ಗುಟ್ಟನ್ನು ಬಯಲು ಮಾಡಬೇಡ.


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.


ಕೆಲವು ದಿನಗಳಾದ ಮೇಲೆ ಎಲ್ಲ ಪದಾಧಿಕಾರಿಗಳು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಟ್ಟನು. ಅಷ್ಟಕ್ಕೆ ಮಾತು ಮುಗಿದು ಅವನಿಂದ ಏನೂ ತಿಳಿದುಕೊಳ್ಳಲಾಗಲಿಲ್ಲ.


ಸತ್ಯಸಾಕ್ಷಿ ಸುಳ್ಳಾಡದ ವ್ಯಕ್ತಿ; ಸುಳ್ಳು ಸಾಕ್ಷಿ ಅಬದ್ಧಪ್ರಿಯ ವ್ಯಕ್ತಿ.


ನೀನೇನಾದರೂ ಈ ನಮ್ಮ ವಿಷಯವನ್ನು ಬಹಿರಂಗಪಡಿಸಿದ್ದೇ ಆದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ನಾವು ಬಿಡುಗಡೆಯಾಗಿರುತ್ತೇವೆ,” ಎಂದು ಹೇಳಿದರು.


ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.


ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.


ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು