Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:17 - ಕನ್ನಡ ಸತ್ಯವೇದವು C.L. Bible (BSI)

17 ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪರೋಪಕಾರವು ತನಗೂ ಉಪಕಾರ; ಕ್ರೂರನು ತನ್ನ ಶರೀರವನ್ನೂ ಹಿಂಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:17
19 ತಿಳಿವುಗಳ ಹೋಲಿಕೆ  

ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.


ಅವನು ಹೀರುವುದು ನಾಗರವಿಷವನು ಸರ್ಪದ ನಾಲಿಗೆ ಕೊಲ್ಲುವುದು ಅವನನು.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು