Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:19 - ಕನ್ನಡ ಸತ್ಯವೇದವು C.L. Bible (BSI)

19 ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:19
18 ತಿಳಿವುಗಳ ಹೋಲಿಕೆ  

ಸಜ್ಜನರ ದುಡಿತ ಜೀವಾಸ್ಪದ; ದುರ್ಜನರ ಆದಾಯ ಪಾಪಾಸ್ಪದ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.


ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ಬುದ್ಧಿಮಾರ್ಗ ಬಿಟ್ಟು ನಡೆದವನು ಪ್ರೇತಗಳ ನಡುವೆ ವಿಶ್ರಾಂತಿ ಪಡೆಯುವನು.


ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ.


ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.


ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.


ನೀತಿ ಪ್ರೀತಿ ಪಾಲಿಸುವವನಿಗೆ ಲಭಿಸುವುದು ಆಯುಸ್ಸು, ಕೀರ್ತಿ, ದೊಡ್ಡಸ್ತಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು