Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:23 - ಕನ್ನಡ ಸತ್ಯವೇದವು C.L. Bible (BSI)

23 ಸಜ್ಜನರ ಕೋರಿಕೆ ಕಲ್ಯಾಣ ಸಾಧಕ; ದುರ್ಜನರ ನಿರೀಕ್ಷೆ ಕೋಪಾಗ್ನಿ ಸಾಧಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಜ್ಜನರ ಆಶೆಯು ಮಂಗಳಾಸ್ಪದ; ದುರ್ಜನರ ನಿರೀಕ್ಷೆಯು ರೋಷಾಸ್ಪದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಳ್ಳೆಯವರ ಬಯಕೆ ಅವರನ್ನು ಕ್ಷೇಮಕ್ಕೆ ನಡೆಸುತ್ತದೆ. ಆದರೆ ದುಷ್ಟರ ಆಕಾಂಕ್ಷೆ ಅವರನ್ನು ದಂಡನೆಗೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, ದುಷ್ಟರ ಅಪೇಕ್ಷೆಯು ತೀರ್ಪಿಗೀಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:23
16 ತಿಳಿವುಗಳ ಹೋಲಿಕೆ  

ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ದುರುಳನೊಂದಿಗೆ ಸಾಯುವುದು ಅವನ ನಿರೀಕ್ಷೆ; ಅಳಿವುದು ಸಾಮರ್ಥ್ಯದ ಮೇಲಿಟ್ಟ ಅವನ ನಂಬಿಕೆ.


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.


ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.


ಸಜ್ಜನರ ಊಟ ಫಲಹಾರ; ವಂಚಕರ ಆಹಾರ ಹಿಂಸಾಚಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು