Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:24 - ಕನ್ನಡ ಸತ್ಯವೇದವು C.L. Bible (BSI)

24 ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ; ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:24
19 ತಿಳಿವುಗಳ ಹೋಲಿಕೆ  

ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.


ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ಸಜ್ಜನರ ಕೋರಿಕೆ ಕಲ್ಯಾಣ ಸಾಧಕ; ದುರ್ಜನರ ನಿರೀಕ್ಷೆ ಕೋಪಾಗ್ನಿ ಸಾಧಕ.


ದಾನ ಗುಣವುಳ್ಳವನು ಧನವಂತನಾಗುವನು; ನೀರು ಹಾಯಿಸುವವನಿಗೆ ನೀರು ದೊರಕುವುದು.


ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.


ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.


ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು