Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:25 - ಕನ್ನಡ ಸತ್ಯವೇದವು C.L. Bible (BSI)

25 ದಾನ ಗುಣವುಳ್ಳವನು ಧನವಂತನಾಗುವನು; ನೀರು ಹಾಯಿಸುವವನಿಗೆ ನೀರು ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಉದಾರಿಯು ಪುಷ್ಟನಾಗುವನು; ನೀರು ಹಾಯಿಸುವವನಿಗೆ ನೀರು ಸಿಕ್ಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:25
13 ತಿಳಿವುಗಳ ಹೋಲಿಕೆ  

ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.


ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನು ಕೊಟ್ಟರು; ಊಟಕ್ಕಾಗಿ ಗೋದಿ, ಜವೆಗೋದಿ ಹಿಟ್ಟು, ಹುರಿಗಾಳು,


ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ಆಗ ನಿನ್ನ ಕಣಜಗಳು ದವಸಧಾನ್ಯದಿಂದ ಭರ್ತಿಯಾಗುವುವು, ನಿನ್ನ ತೊಟ್ಟಿಗಳು ದ್ರಾಕ್ಷಾರಸದಿಂದ ತುಂಬಿ ತುಳುಕುವುವು.


ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು