Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:28 - ಕನ್ನಡ ಸತ್ಯವೇದವು C.L. Bible (BSI)

28 ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧನವನ್ನೇ ನಂಬಿದವನು ಬಿದ್ದು ಹೋಗುವನು; ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಐಶ್ವರ್ಯದ ಮೇಲೆ ಭರವಸೆಯಿಟ್ಟಿರುವವನು ಎಲೆಯಂತೆ ಉದುರಿಹೋಗುವನು. ಆದರೆ ಸಧರ್ಮಿಯು ಚಿಗುರಿದ ಎಲೆಯಂತೆ ಬೆಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:28
13 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.


ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು