Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:29 - ಕನ್ನಡ ಸತ್ಯವೇದವು C.L. Bible (BSI)

29 ಮನೆಯವರನ್ನೆ ಬಾಧಿಸುವವನು ಗಳಿಸುವುದು ಗಾಳಿ; ಬಿದ್ದಿರುವನವನು ಜ್ಞಾನಿಗೆ ಊಳಿಗನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು; ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತಕ್ಕೊಳಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:29
10 ತಿಳಿವುಗಳ ಹೋಲಿಕೆ  

ಬಂದಂತೆಯೇ ಹಿಂದಿರುಗಿ ಹೋಗುವನು. ಅವನು ಪಟ್ಟ ಪ್ರಯಾಸವೆಲ್ಲ ಗಾಳಿಗೆ ತೂರಿದಂತೆ ನಿರರ್ಥಕ, ಇದು ದುರದೃಷ್ಟಕರ.


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಕೆಟ್ಟವರು ಒಳ್ಳೆಯವರಿಗೆ ಬಾಗಬೇಕಾಗುವುದು; ದುಷ್ಟರು ಸಜ್ಜನರ ಬಾಗಿಲಿಗೆ ಅಡ್ಡಬೀಳಬೇಕಾಗುವುದು.


ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆ ಬಹು ಬುದ್ಧಿವಂತೆ ಹಾಗು ಸುಂದರಿ. ಕಾಲೇಬನ ವಂಶದವನಾದ ಆ ಮನುಷ್ಯನಾದರೊ ನಿಷ್ಠುರನು ಹಾಗು ದುಷ್ಕರ್ಮಿ. ಅವನು ಬಹು ಧನವಂತನೂ ಆಗಿದ್ದ. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಮ್ಮೆ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು