Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:3 - ಕನ್ನಡ ಸತ್ಯವೇದವು C.L. Bible (BSI)

3 ಸಜ್ಜನರಿಗೆ ಸರಳತೆ ಮಾರ್ಗದರ್ಶನ, ದುರ್ಜನರಿಗೆ ಅವರ ವಕ್ರತೆ ಸಂಹಾರಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ; ವಂಚಕರಿಗೆ ವಕ್ರತೆಯು ನಾಶಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:3
13 ತಿಳಿವುಗಳ ಹೋಲಿಕೆ  

ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು.


ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ.


ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.


ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.


ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರನ್ನೇ ಎಳೆದೊಯ್ಯುವುದು ಅವರ ಹಿಂಸಾಚಾರ.


ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ಸರ್ವೇಶ್ವರನ ದೃಷ್ಟಿ ಸಜ್ಜನರನ್ನು ಕಾಯುವುದು; ವಂಚಕರ ಮಾತನ್ನು ನಿರರ್ಥಕಗೊಳಿಸುವುದು.


ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು