Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:1 - ಕನ್ನಡ ಸತ್ಯವೇದವು C.L. Bible (BSI)

1 ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತಿಳುವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ; ಪಶುಪ್ರಾಯನು ಗದರಿಕೆಯನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:1
21 ತಿಳಿವುಗಳ ಹೋಲಿಕೆ  

ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II


ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?


ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.


ಮಾನವರಲ್ಲಿ ನನ್ನಂಥ ಪಶುಪ್ರಾಯನಿಲ್ಲ; ಮನುಷ್ಯ ವಿವೇಕವೂ ನನಗಿಲ್ಲ.


ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಬಾವಿನಲ್ಲಿ ಮಾಂಸ ಕಾಣಿಸಿದರೆ


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು